ಕೋವಿಡ್ ಕರ್ಫ್ಯೂ ಸಂದರ್ಭ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ: ಸಿಎಂ ಯಡಿಯೂರಪ್ಪ

Update: 2021-04-26 10:33 GMT

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 14 ದಿನಗಳ ಕಾಲ ಕೋವಿಡ್ ಕರ್ಫ್ಯೂ ಘೋಷಿಸಿದ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೋವಿಡ್-19 ಹರಡುವುದನ್ನು ನಿಯಂತ್ರಿಸಲು ಆಯಾ ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ತೆಗದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದಾರೆ.

ರಾಜ್ಯದಲ್ಲಿ ಮಾರಣಾಂತಿಕ ಕೊರೋನ ವೈರಸ್ ಹರಡುವುದನ್ನು ತಡೆಯಲು ಜಿಲ್ಲಾಧಿಕಾರಿಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ತಹಶೀಲ್ದಾರ್ ಗಳು ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ. 

ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಜನತೆಗೆ ಕರೆ ನೀಡಿದ ಸಿಎಂ, ಜನರು ಸಹಕರಿಸಿದರೆ ನಾವು ನಮ್ಮ ಗುರಿಯನ್ನು ಸಾಧಿಸಬಹುದು ಎಂದರು.

ಎಪ್ರಿಲ್ 27ರಿಂದ ಜಾರಿಗೆ ಬರುವಂತೆ ಕೋವಿಡ್ ಕರ್ಫ್ಯೂ ಫೋಷಿಸಿರುವ ರಾಜ್ಯ ಸರಕಾರವು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಿತು. ಕರ್ಫ್ಯೂ ಸಮಯದಲ್ಲಿ ಕೆಎಸ್ಸಾರ್ಟಿಸಿ ಹಾಗೂ ಬಿಎಂಟಿಸಿ ಸೇರಿದಂತೆ ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News