ಬಿಪಿಎಲ್ ಕುಟುಂಬಗಳ ಪ್ರತಿ ಯೂನಿಟ್‍ಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಿ: ಸರಕಾರಕ್ಕೆ ಸಂಸದ ಡಿ.ಕೆ.ಸುರೇಶ್ ಪತ್ರ
ಬೆಂಗಳೂರು, ಎ. 26: ಕೊರೋನ ಎರಡನೆ ಅಲೆಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿದಾರ ಕುಟುಂಬಗಳ ಪ್ರತಿ ಯೂನಿಟ್‍ಗೆ ಕೇಂದ್ರ ಸರಕಾರ ಘೋಷಣೆ ಮಾಡಿವಂತೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.
ಕರ್ಫ್ಯೂ ಮತ್ತು ಲಾಕ್‍ಡೌನ್ ಘೋಷಣೆ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನರಿಗೆ ಪ್ರತಿನಿತ್ಯದ ಆಹಾರಕ್ಕೆ ತುಂಬಾ ತೊಂದರೆಯಾಗುತ್ತಿದ್ದು, ರಾಜ್ಯದಲ್ಲಿನ ಬಿಪಿಎಲ್ ಕಾರ್ಡುಗಳಿಗೆ ಪ್ರತಿ ತಿಂಗಳು ಯೂನಿಟ್‍ಗೆ 2 ಕೆಜಿ ಅಕ್ಕಿ ಮತ್ತು 3 ಕೆಜಿ ರಾಗಿ ವಿತರಣೆ ಮಾಡುತ್ತಿದೆ. ಕೇಂದ್ರ ಸರಕಾರ ಪ್ರತಿ ಯೂನಿಟ್‍ಗೆ 5 ಕೆಜಿಯನ್ನು ನಿಗದಿಪಡಿಸಿದ್ದು, ತ್ವರಿತವಾಗಿ ಕೇಂದ್ರ ಸರಕಾರದ ನೆರವು ಪಡೆದು ಬಡವರಿಗೆ ತಲಾ 5 ಕೆಜಿ ಅಕ್ಕಿ ವಿತರಣೆಗೆ ಸಂಬಂಧಪಟ್ಟ ಇಲಾಖೆಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಡಿ.ಕೆ.ಸುರೇಶ್, ಪತ್ರದಲ್ಲಿ ಆಗ್ರಹಿಸಿದ್ದಾರೆ.