×
Ad

ಕ್ರೀಡಾಂಗಣಕ್ಕೆ ಮೇಲ್ಚಾವಣಿ ನಿರ್ಮಾಣಕ್ಕೆ ಚಾಲನೆ

Update: 2021-04-26 18:26 IST

ಉಡುಪಿ, ಎ.26: ಕ್ರೀಡಾಪಟುಗಳು ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಲು ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಾಧನೆಗೆ ಪ್ರೇರೇಪಣೆ ನೀಡಬೇಕು ಎಂದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದ್ದಾರೆ.

ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 22.316 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಛಾವಣಿ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡುತಿದ್ದರು.

ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳಿಗೆ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅಗತ್ಯ ಸೌಲ್ಯಗಳನ್ನು ಒದಗಿಸಿ ಅವರನ್ನು ಉತ್ತಮ ಕ್ರೀಡಾಪಟು ಗಳನ್ನಾಗಿ ರೂಪಿಸಬೇಕು ಎಂದು ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

ಜಿಪಂ ಅಧ್ಯಕ್ಷ ದಿನಕರ ಬಾಬು ಮಾತನಾಡಿದರು. ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಉಪಸ್ಥಿತರಿದ್ದರು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News