×
Ad

ಎಪ್ರಿಲ್‌ 30ರ ವರೆಗೆ ಲಾಕ್‌ ಡೌನ್‌ ಹೇರಿದ ಪುದುಚ್ಚೇರಿ ಸರಕಾರ

Update: 2021-04-27 12:30 IST

ಪುದುಚ್ಚೇರಿ: ಪುದುಚ್ಚೇರಿಯ ಕೇಂದ್ರಾಡಳಿತ ಪ್ರದೇಶವು ಮಂಗಳವಾರದಿಂದ ಎಪ್ರಿಲ್‌ ೩೦ರವರೆಗೆ ತನ್ನ ವ್ಯಾಪ್ತಿಯಾದ್ಯಂತ ಲಾಕ್‌ ಡೌನ್‌ ಜಾರಿಗೊಳಿಸಿ ಆದೇಶ ನೀಡಿದೆ. ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ ಬಳಿಕ ಲೆಫ್ಟಿನೆಂಟ್‌ ಗವರ್ನರ್‌ ತಮಿಳಿಸೈ ಸೌಂದರ್‌ ರಾಜನ್‌ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಈಗಾಗಲೇ ಕೇಂದ್ರಾಡಳಿತ ಪ್ರದೇಶವಾದ ಪುದುಚ್ಚೇರಿಯಲ್ಲಿ ರಾತ್ರಿ ೧೦ರಿಂದ ಬೆಳಗ್ಗೆ ೫ ಗಂಟೆಯವರೆಗೆ ನೈಟ್‌ ಕರ್ಫ್ಯೂ ಪಾಲಿಸಿಕೊಂಡು ಬರಲಾಗುತ್ತಿತ್ತು. ಸರ್ಕಾರ ಹೊರಡಿಸಿದ ಆದೇಶದ ಪ್ರಕಾರ ಇತರ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಮತ್ತು ಕೆಲವು ಅಗತ್ಯ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಅದರಂತೆ ತಾತ್ಕಾಲಿಕ ಮಳಿಗೆಗಳು, ತರಕಾರಿ ಮತ್ತು ಹಣ್ಣುಗಳ ಅಂಗಡಿಗಳು, ದಿನಸಿ, ಡೈರಿ ಮತ್ತು ಹಾಲಿನ ಬೂತ್, ಮಾಂಸ ಮತ್ತು ಮೀನು, ಪ್ರಾಣಿಗಳ ಮೇವಿನ ಮಳಿಗೆಗಳು ಕಾರ್ಯನಿರ್ವಹಿಸಲಿವೆ. ದೊಡ್ಡ ಸ್ವರೂಪದ ಅಂಗಡಿಗಳು, ಶಾಪಿಂಗ್ ಸಂಕೀರ್ಣಗಳು ಮತ್ತು ಮಾಲ್‌ ಗಳು, ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದು ಮತ್ತು ಈ ಅವಧಿಯಲ್ಲಿ ಕಾರ್ಯನಿರ್ವಹಿಸಲು ಅನುಮತಿಯನ್ನು ಹೊಂದಿಲ್ಲ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News