ಕೋಲಾರ : ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ಕೊರತೆ ಆರೋಪ; 8 ಮಂದಿ ಮೃತ್ಯು

Update: 2021-04-27 08:12 GMT
ಮೃತರ ಕುಟುಂಬಸ್ಥರು

ಕೋಲಾರ : ಎಸ್.ಎನ್.ಆರ್. ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ಕೊರತೆಯಿಂದ ಎಂಟು ಮಂದಿ ಮೃತಪಟ್ಟಿರುವುದಾಗಿ ದೂರಲಾಗಿದೆ.

ಕೋವಿಡ್ ಸೋಂಕಿತ ಐದು ಮಂದಿ ಹಾಗೂ ಕೋವಿಡೇತರ ಮೂರು ಮಂದಿ ಆಮ್ಲಜನಕ ಪೂರೈಕೆ ಕೊರತೆಯಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದ್ದು, ಘಟನೆ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. 

ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಸರಿಯಾಗಿ ಆಮ್ಲಜನಕ ಪೂರೈಕೆ ಆಗುತ್ತಿಲ್ಲ ಎಂದು ರೋಗಿಗಳ ಸಂಬಂಧಿಕರು ವೈಧ್ಯಾಧಿಕಾರಿಗಳಿಗೆ ಫೋನ್ ಮಾಡಿದರೂ ಕರೆ ಸ್ವೀಕರಿಸದೇ ನಿರ್ಲಕ್ಷ್ಯ ದೋರಣೆಯಿಂದ ಐವರು ಕೋವಿಡ್ ಸೋಂಕಿತರೂ ಸೇರಿದಂತೆ ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾಡಳಿತ ಮತ್ತು ವೈಧ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಜಿಲ್ಲಾ ಶಸ್ತ್ರ ಚಿಕಿತ್ಸಕ ನಾರಾಯಣಸ್ವಾಮಿ ಮತ್ತು ಆರ್. ಎಂ. ಒ ಅವರ ಬೇಜವಾಬ್ದಾರಿ ವರ್ತನೆ  ಆರೋಪದಲ್ಲಿ ಅಮಾನತ್ತುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News