×
Ad

ಆಂಧ್ರಪ್ರದೇಶ: ಆ್ಯಂಬುಲೆನ್ಸ್ ಲಭ್ಯವಾಗದೆ ಬೈಕ್ ನಲ್ಲಿ ಮೃತದೇಹ ರವಾನೆ

Update: 2021-04-27 20:37 IST

ಹೈದರಾಬಾದ್, ಎ.27: ಸಕಾಲದಲ್ಲಿ ಆ್ಯಂಬುಲೆನ್ಸ್ ಸೇವೆ ಲಭ್ಯವಾಗದ ಕಾರಣ ಕೊರೋನ ಸೋಂಕಿನಿಂದ ಮೃತಪಟ್ಟ ಮಹಿಳೆಯೊಬ್ಬರ ಮೃತದೇಹವನ್ನು ಬೈಕ್ನಲ್ಲಿ ಸಾಗಿಸಿದ ಪ್ರಕರಣ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ವರದಿಯಾಗಿದೆ. 

ಶ್ರೀಕಾಕುಳಂ ಜಿಲ್ಲೆಯ ಮಂದಸ ಮಂಡಲ್ ಗ್ರಾಮದ 50 ವರ್ಷದ ಮಹಿಳೆಯಲ್ಲಿ ಕೊರೋನ ಸೋಂಕಿನ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಸೋಮವಾರ ಆಸ್ಪತ್ರೆಗೆ ಕರೆದೊಯ್ದು ಸೋಂಕು ಪರೀಕ್ಷೆ ನಡೆಸಲಾಗಿತ್ತು. ಆದರೆ ಪರೀಕ್ಷೆಯ ವರದಿ ಬರುವ ಮೊದಲೇ ಮಹಿಳೆಯ ಆರೋಗ್ಯಸ್ಥಿತಿ ಹದಗೆಟ್ಟು ಮೃತಪಟ್ಟಿದ್ದಾರೆ. 

ಮೃತದೇಹವನ್ನು ಸ್ಮಶಾನಕ್ಕೆ ಸಾಗಿಸಲು ಆ್ಯಂಬುಲೆನ್ಸ್ ಅಥವಾ ಬೇರೆ ವಾಹನಗಳಿಗಾಗಿ ಬಹಳ ಹೊತ್ತು ಕಾದ ಬಳಿಕ ಮಹಿಳೆಯ ಮಗ ಮತ್ತು ಅಳಿಯ ಬೈಕ್ನಲ್ಲಿ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ಸಾಗಿಸಿದ್ದಾರೆ ಎಂದು ವರದಿಯಾಗಿದೆ. ಕೊರೋನ ಸೋಂಕಿನಿಂದ ಮೃತಪಡುವವರ ಸಂಖ್ಯೆ ಹೆಚ್ಚಿರುವಂತೆಯೇ ಮೃತದೇಹಗಳನ್ನು ಸ್ಮಶಾನಕ್ಕೆ ಸಾಗಿಸಲು ಆ್ಯಂಬುಲೆನ್ಸ್ನ ಕೊರತೆಯೂ ಹೆಚ್ಚಿದೆ. ಕಳೆದ ವರ್ಷ ಆಂಧ್ರಪ್ರದೇಶ ಸರಕಾರ ಕೊರೋನ ಸೋಂಕಿನ ಹಿನ್ನೆಲೆಯಲ್ಲಿ 1088 ಆ್ಯಂಬುಲೆನ್ಸ್ ಹಾಗೂ 104 ಸಂಚಾರಿ ವೈದ್ಯಕೀಯ ಘಟಕದ ವ್ಯವಸ್ಥೆ ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News