×
Ad

ತಾಲೂಕು, ಜಿಲ್ಲಾ ಪಂಚಾಯತ್ ಗಳಿಗೆ ಆಡಳಿತಾಧಿಕಾರಿಗಳ ನೇಮಕಕ್ಕೆ ಸರಕಾರ ಆದೇಶ

Update: 2021-04-27 21:11 IST

ಬೆಂಗಳೂರು, ಎ. 27: ಕೋವಿಡ್ ಎರಡನೆ ಅಲೆ ಹಿನ್ನೆಲೆಯಲ್ಲಿ ಅವಧಿ ಮುಕ್ತಾಯಗೊಳ್ಳಲಿರುವ ರಾಜ್ಯದಲ್ಲಿನ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳಿಗೆ ಚುನಾವಣೆ ಮುಂದೂಡಲು ಆಯೋಗಕ್ಕೆ ಶಿಫಾರಸ್ಸು ಮಾಡಿರುವ ಸರಕಾರ, ತಕ್ಷಣದಿಂದಲೇ ಜಾರಿಗೆ ಬರುವಂತೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಮೇ-ಜೂನ್‍ನಲ್ಲಿ ಅವಧಿ ಮುಕ್ತಾಯಗೊಳ್ಳಲಿರುವ 30 ಜಿ.ಪಂ. ಹಾಗೂ ಹೊಸದಾಗಿ ರಚನೆಯಾಗಿರುವ ತಾಲೂಕುಗಳು ಸೇರಿ ಒಟ್ಟು 229 ತಾಲೂಕು ಪಂಚಾಯತ್ ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆಯಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿ.ಪಂ.ಗೆ, ಆಯಾ ತಾಲೂಕು ಪಂಚಾಯಿತಿ ಉಪ ಕಾರ್ಯದರ್ಶಿ ಅಥವಾ ಅದೇ ಶ್ರೇಣಿಯ ಅಧಿಕಾರಿಗಳನ್ನು ಆಡಳಿತಾಧಿಕಾರಿಯಾಗಿ ನೇಮಿಸಲು ಪ್ರಾದೇಶಿಕ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News