ಕೊರೋನ ಕರ್ಫ್ಯೂ: ಮೈಸೂರು ವಿವಿ ಪರೀಕ್ಷೆಗಳು ಮುಂದೂಡಿಕೆ

Update: 2021-04-27 19:01 GMT

ಮೈಸೂರು,ಎ.27: ರಾಜ್ಯದಲ್ಲಿ ದಿನೇ ದಿನೇ ಕೊರೋನ ಪ್ರಕರಣಗಳು ಹೆಚ್ಚುತ್ತಿದ್ದು ಇದನ್ನ ತಡೆಗಟ್ಟುವ ಸಲುವಾಗಿ ಮೇ11 ರವರೆಗೆ ರಾಜ್ಯ ಸರ್ಕಾರ ಕೊರೋನ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಿಗದಿಗೊಳಿಸಿದ್ಧ ವಿವಿಧ ಪರೀಕ್ಷೆಗಳನ್ನ ಮೈಸೂರು ವಿಶ್ವ ವಿದ್ಯಾನಿಲಯ ಮುಂದೂಡಿದೆ.

ಈ ಕುರಿತು ಮೈಸೂರು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಆದೇಶ ಹೊರಡಿಸಿದ್ದಾರೆ. ಕೋವಿಡ್-19 ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಈಗಾಗಲೇ ನಿಗದಿಗೊಳಿಸಿದ್ಧ ಬಿ.ಆರ್ಕ್, ಬಿ.ಪಿ.ಎಡ್ ಹಾಗೂ ಎಲ್ಲಾ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ಪರಿಷ್ಕೃತ ದಿನಾಂಕಗಳನ್ನು ಮುಂದೆ ಪ್ರಕಟಿಸಲಾಗುವುದು ಎಂದು ಕುಲಸಚಿವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News