×
Ad

ಆಸ್ಪತ್ರೆಯಲ್ಲಿ ಅಗ್ನಿ ದುರಂತ: ನಾಲ್ವರು ರೋಗಿಗಳು ಮೃತ್ಯು

Update: 2021-04-28 10:39 IST
ಸಾಂದರ್ಭಿಕ ಚಿತ್ರ 

ಹೊಸದಿಲ್ಲಿ: ಮಹಾರಾಷ್ಟ್ರದ ಥಾಣೆಯಲ್ಲಿ ಬುಧವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ರೋಗಿಗಳು ಮೃತಪಟ್ಟಿದ್ದಾರೆ.

ಥಾಣೆ ಜಿಲ್ಲೆಯ ಮುಂಬ್ರಾದ ಕೌಸಾದಲ್ಲಿ ಮುಂಜಾನೆ 3:40ರ ಸುಮಾರಿಗ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.  ಮೂರು ಅಗ್ನಿಶಾಮಕ ಯಂತ್ತಗಳು ಹಾಗೂ ಐದು ಆ್ಯಂಬುಲೆನ್ಸ್ ಗಳು ಸ್ಥಳದಲ್ಲೇ ಇವೆ.

ಆಸ್ಪತ್ರೆಯಲ್ಲಿದ್ದ 20 ರೋಗಿಗಳನ್ನು ರಕ್ಷಿಸಲಾಗಿದೆ. ಇವರಲ್ಲಿ 6 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಬೆಂಕಿಯಿಂದಾಗಿ ಆಸ್ಪತ್ರೆಯ ಮೊದಲ ಮಹಡಿಗೆ ಸಂಪೂರ್ಣ ಹಾನಿಯಾಗಿದೆ. ಆಸ್ಪತ್ರೆಯಲ್ಲಿ ಯಾವುದೇ ಕೋವಿಡ್ ರೋಗಿಗಳಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಘಟನೆಯ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಮಾಹಿತಿ ನೀಡಲಾಗಿದ್ದು, ಸಂತ್ರಸ್ತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಮಹಾರಾಷ್ಟ್ರ ಸಚಿವ ಜಿತೇಂದ್ರ ಅವದ್ ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News