ಪತ್ರಕರ್ತ ಸಿದ್ದೀಕ್ ಕಪ್ಪನ್ ರನ್ನು ಚಿಕಿತ್ಸೆಗಾಗಿ ದಿಲ್ಲಿಗೆ ವರ್ಗಾಯಿಸಲು ಸುಪ್ರೀಂಕೋರ್ಟ್ ಆದೇಶ
Update: 2021-04-28 14:24 IST
ಹೊಸದಿಲ್ಲಿ: ಹತ್ರಸ್ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಗಾರಿಕೆಗೆಂದು ತೆರಳಿದ್ದ ಕೇರಳದ ಪತ್ರಕರ್ತ ಸಿದ್ದೀಕ್ ಕಪ್ಪನ್ ರನ್ನು ಯುಎಪಿಎ ಅಡಿ ಬಂಧಿಸಲಾಗಿತ್ತು. ಮಥುರಾ ಜೈಲಿನಲ್ಲಿ ಅವರು ಕೋವಿಡ್ ಪಾಸಿಟಿವ್ ಆಗಿದ್ದು, ಆರೋಗ್ಯ ಪರಿಸ್ಥಿತಿ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆ ನೀಡಬೇಕೆಂದು ಅವರ ಪತ್ನಿ ರೈಹಾನತ್ ಮಾಡಿದ್ದ ಮನವಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಕಪ್ಪನ್ ರನ್ನು ದಿಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲು ಸೂಚನೆ ನೀಡಿದೆ.
ದಿಲ್ಲಿ ಸರಕಾರದ ಯಾವುದೇ ಆಸ್ಪತ್ರೆ ಅಥವಾ ಏಮ್ಸ್ ಗೆ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಚಿಕಿತ್ಸೆ ನೀಡಿದ ಬಳಿಕ ಮಥುರಾ ಜೈಲಿಗೆ ವಾಪಸಾಗಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಸದ್ಯ ಈ ಆದೇಶದಿಂದ ಉತ್ತರಪ್ರದೇಶದ ಆದಿತ್ಯನಾಥ್ ಸರಕಾರಕ್ಕೆ ಹಿನ್ನಡೆಯಾಗಿದೆ.