ಕನಿಷ್ಠ 150 ಮಾನವ ದಿನಗಳ ಉದ್ಯೋಗ ಕಲ್ಪಿಸಲು ಪ್ರಿಯಾಂಕ್ ಖರ್ಗೆ ಮನವಿ

Update: 2021-04-28 12:09 GMT

ಬೆಂಗಳೂರು, ಎ. 28: ಕೊರೋನ ಎರಡನೆ ಅಲೆ ಹಿನ್ನೆಲೆಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ 100 ಮಾನವ ದಿನಗಳಿಂದ ಕನಿಷ್ಠ 150 ಮಾನವ ದಿನಗಳ ಉದ್ಯೋಗವನ್ನು ಕಲ್ಪಿಸಬೇಕು ಎಂದು ಕೋರಿ ಮಾಜಿ ಸಚಿವ ಹಾಗೂ ಚಿತ್ತಾಪುರ ಕ್ಷೇತ್ರದ ಹಾಲಿ ಶಾಸಕ ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಕೊರೋನ ಎರಡನೆ ಅಲೆ ತೀವ್ರ ಸ್ವರೂಪದಲ್ಲಿ ವ್ಯಾಪಿಸುತ್ತಿದ್ದು ಅದರಲ್ಲೂ ಪಟ್ಟಣ ಮತ್ತು ನಗರ ಪ್ರದೇಶದಲ್ಲಿ ಹೆಚ್ಚಾಗಿ ಸೋಂಕು ಹರಡುತ್ತಿದೆ. ಅಲ್ಲದೆ, ಹಳ್ಳಿಗಳಿಂದ ತಮ್ಮ ಜೀವನ ಕಟ್ಟಿಕೊಳ್ಳಲು ನಗರ ಪ್ರದೇಶಕ್ಕೆ ಉದ್ಯೋಗ ಅರಸಿ ಬಂದಿರುವ ಲಕ್ಷಾಂತರ ಜನರು ಸರಕಾರ ಹೇರಿರುವ ಕೊರೋನ ಕರ್ಫ್ಯೂವಿನಿಂದ ತಮ್ಮ ಹಳ್ಳಿಗಳಿಗೆ ಮರಳುತ್ತಿದ್ದಾರೆಂದು ಪ್ರಿಯಾಂಕ್ ಖರ್ಗೆ ಗಮನ ಸೆಳೆದಿದ್ದಾರೆ.

ತಮ್ಮ ಹಳ್ಳಿಗಳಿಗೆ ಹಿಂದಿರುವ ಜನರ ಉದ್ಯೋಗವಿಲ್ಲದೆ ಜೀವನ ನಡೆಸಲು ಬಹಳ ಕಷ್ಟ. ಆದುದರಿಂದ ಈ ಬಾರಿ ಉದ್ಯೋಗ ಖಾತ್ರಿ ಯೋಜನೆಯಡಿ 100 ಮಾನವ ದಿನಗಳ ಬದಲಿಗೆ 150 ಮಾನವ ದಿನಗಳ ಕಾಲ ಉದ್ಯೋಗ ಕಲ್ಪಿಸುವುದರ ಜೊತೆಗೆ ಬೇಡಿಕೆ ಆಧಾರದ ಮೇಲೆ ಇದಕ್ಕಿಂತ ಹೆಚ್ಚು ದಿನಗಳ ಕಾಲ ಉದ್ಯೋಗ ನೀಡಲು ಆದೇಶ ಹೊರಡಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News