ಸರಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ: ಗಾರ್ಮೆಂಟ್ಸ್ ಕಾರ್ಯನಿರ್ವಹಣೆಗೆ ಅವಕಾಶ
Update: 2021-04-28 19:54 IST
ಬೆಂಗಳೂರು, ಎ.28: ರಾಜ್ಯ ಸರಕಾರವು ಕೋವಿಡ್ ಕರ್ಫ್ಯೂಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಬುಧವಾರ ಹೊರಡಿಸಿದ್ದು, ಗಾರ್ಮೆಂಟ್ಸ್ ಗಗಳನ್ನು ಶೇ.50ರಷ್ಟು ಸಿಬ್ಬಂದಿಗಳನ್ನು ಬಳಸಿಕೊಂಡು, ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.