ಉಡುಪಿ ಜಿಲ್ಲೆಯಲ್ಲಿ ಬುಧವಾರ 664 ಮಂದಿಗೆ ಕೊರೋನ ಪಾಸಿಟಿವ್
ಉಡುಪಿ, ಎ.28: ಜಿಲ್ಲೆಯಲ್ಲಿ ಕೋವಿಡ್-19ರ ಎರಡನೇ ಅಲೆ ಎಲ್ಲರ ನಿರೀಕ್ಷೆಯನ್ನು ಮೀರಿ ಜಿಲ್ಲೆಯಾದ್ಯಂತ ಶರವೇಗದಲ್ಲಿ ಹಬ್ಬುತ್ತಿದೆ. ಬುಧವಾರ ಜಿಲ್ಲೆಯಲ್ಲಿ 664 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದು ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಕಾಣಿಸಿಕೊಂಡ ಅತೀ ಹೆಚ್ಚಿನ ಪಾಸಿಟಿವ್ ಸಂಖ್ಯೆ ಆಗಿದೆ.
ಇದರೊಂದಿಗೆ ದಿನದಲ್ಲಿ 326 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆಯೂ ಇದೀಗ 2230ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದ 664 ಮಂದಿಯಲ್ಲಿ 394ಮಂದಿ ಪುರುಷರಾದರೆ, 270 ಮಂದಿ ಮಹಿಳೆಯರು. ಇವರಲ್ಲಿ 332 ಮಂದಿ ಉಡುಪಿ ತಾಲೂಕಿನವರು. ಉಳಿದಂತೆ 249 ಮಂದಿ ಕುಂದಾಪುರ ಹಾಗೂ 76 ಮಂದಿ ಕಾರ್ಕಳ ತಾಲೂಕಿನವರು. ಹೊರಜಿಲ್ಲೆಗಳಿಂದ ಚಿಕಿತ್ಸೆಯೂ ಸೇರಿದಂತೆ ವಿವಿಧ ಕಾರಣಗಳಿಗಾಗಿ ಆಗಮಿಸಿದ ಏಳು ಮಂದಿ ಸಹ ಇಂದು ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ.ಸೂಡ ತಿಳಿಸಿದರು.
ಮಂಗಳವಾರ 326 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 27,890 ಕ್ಕೇರಿದೆ. ನಿನ್ನೆ ಜಿಲ್ಲೆಯ 3549 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 664 ಮಂದಿ ಸೇರಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 30,314 ಆಗಿದೆ ಎಂದು ಡಾ.ಸೂಡ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,98,448 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಈವರೆಗೆ ಕೊರೋನದಿಂದ ಮೃತಪಟ್ಟವರ ಸಂಖ್ಯೆ 194 ಆಗಿದೆ.
9814 ಮಂದಿಗೆ ಕೋವಿಡ್ ಲಸಿಕೆ
ದಿನದಲ್ಲಿ 9814 ಮಂದಿಗೆ ಕೋವಿಡ್ ಲಸಿಕೆ ಉಡುಪಿ, ಎ.26: ಕೊರೋನ ವಿರುದ್ಧದ ಲಸಿಕೆಯನ್ನು ಜಿಲ್ಲೆಯಲ್ಲಿ ಇಂದು 9814 ಮಂದಿ ಸ್ವೀಕರಿಸಿದ್ದಾರೆ. ಇವರಲ್ಲಿ 4501 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 5313 ಮಂದಿಗೆ ಎರಡನೇ ಡೋಸ್ ನೀಡಲಾಯಿತು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 45 ವರ್ಷ ಮೇಲಿನ ಒಟ್ಟು 9522 ಮಂದಿ ಇಂದು ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 4432 ಮಂದಿ ಮೊದಲ ಡೋಸ್‌ನ್ನೂ, 5090 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. ಇಂದು 210 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 82 ಮಂದಿ ಕೊರೋನ ಮುಂಚೂಣಿ ಯೋಧರು ಸಹ ಲಸಿಕೆ ಪಡೆದಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ 1,85,605 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 47,760 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.
ಕೋವಿಡ್-19 ನಿಯಮ ಉಲ್ಲಂಘನೆ: 80,000ರೂ. ದಂಡ ವಸೂಲಿ
ಉಡುಪಿ ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ, ಸುರಕ್ಷಿತಾ ಅಂತರ ಕಾಪಾಡದೇ ಕೋವಿಡ್-19 ನಿಯಮಗಳನ್ನು ಉಲ್ಲಂಘಿಸಿದ ಒಟ್ಟು 231 ಮಂದಿಯಿಂದ ಎ.27ರಂದು 80,000ರೂ. ದಂಡ ವಸೂಲಿ ಮಾಡಲಾಗಿದೆ.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 32 ಮಂದಿ ಯಿಂದ 60,100ರೂ., ಗ್ರಾಪಂ ವ್ಯಾಪ್ತಿಯಲ್ಲಿ 1,200ರೂ., ಅಬಕಾರಿ ಇಲಾಖೆಯಿಂದ 1,400ರೂ., ಕಂದಾಯ ಇಲಾಖೆಯಿಂದ 1,200ರೂ., ಪೊಲೀಸ್‌ಇಲಾಖೆಯಿಂದ 15,200ರೂ. ದಂಡವನ್ನು ವಸೂಲಿ ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ 32,650 ಮಂದಿಯಿಂದ 35,04,750ರೂ. ದಂಡವನ್ನು ವಸೂಲಿ ಮಾಡಲಾಗಿದೆ ಎಂು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.