ಬೆಂಗಳೂರಿನಲ್ಲಿ ಐಪಿಎಲ್ ರದ್ದುಗೊಳಿಸಲು ಆಗ್ರಹಿಸಿ ಸರಕಾರಕ್ಕೆ ಪತ್ರ ಬರೆದ ವಿಧಾನ ಪರಿಷತ್ ಸದಸ್ಯ

Update: 2021-04-28 16:09 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.28: ಕೊರೋನ ಎರಡನೆ ಅಲೇ ಉಲ್ಬಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೇ 9 ರಿಂದ 10 ಐಪಿಎಲ್ ಪಂದ್ಯಗಳನ್ನು ನಡೆಸಲು ಕೆಎಸ್‍ಸಿಎ ಕೈಗೊಂಡಿರುವ ತೀರ್ಮಾನವನ್ನು ಕೈಬಿಡುವಂತೆ ಸೂಚಿಸಲು ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಕೆ. ರಾಥೋಡ್ ಅವರು ಪತ್ರ ಬರೆದಿದ್ದಾರೆ.

ಐಪಿಎಲ್ ಪಂದ್ಯಗಳನ್ನು ನಡೆಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಎಲ್ಲ ಸಿದ್ಧತೆಗಳನ್ನೂ ಮಾಡಿಕೊಂಡಿದೆ. ಪಂದ್ಯಗಳು ನಡೆದರೆ ಕೊರೋನ ಸೋಂಕು ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಹೀಗಾಗಿ, ಈ ಪಂದ್ಯಗಳನ್ನು ರದ್ದುಗೊಳಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.  

(ಪ್ರಕಾಶ್ ಕೆ. ರಾಥೋಡ್)

ಈಗಾಗಲೇ ಖ್ಯಾತ ಸ್ಪಿನ್ನರ್ ಆರ್.ಅಶ್ವಿನ್ ಹಾಗೂ ಮೂವರು ಆಸ್ಟ್ರೇಲಿಯಾದ ಆಟಗಾರರು ಐಪಿಎಲ್‍ನಿಂದ ಹೊರಹೋಗಿದ್ದಾರೆ. ರಾಷ್ಟ್ರೀಯ ಮಹಿಳಾ ಹಾಕಿ ತಂಡದ 7 ಸದಸ್ಯರಿಗೂ ಸೋಂಕು ತಗುಲಿದೆ. ಇಂತಹ ಸಂದರ್ಭದಲ್ಲಿ ಐಪಿಎಲ್ ಆಯೋಜನೆ ಬೇಕಿಲ್ಲ. ಅದರ ಬದಲು ಜನರ ಕಷ್ಟಕ್ಕೆ ಸ್ಪಂದಿಸಬೇಕಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News