ಬೆಂಗಳೂರು: ಆಸ್ಪತ್ರೆಯ ನಾಲ್ಕನೆ ಮಹಡಿಯಿಂದ ಹಾರಿ ಕೋವಿಡ್ ರೋಗಿ ಆತ್ಮಹತ್ಯೆ

Update: 2021-04-28 16:13 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಎ.28: ನಗರದ ವಿಕ್ಟೋರಿಯಾ ಆಸ್ಪತ್ರೆಯ ನಾಲ್ಕನೆ ಮಹಡಿಯಿಂದ ಹಾರಿ ಕೋವಿಡ್ ಸೋಂಕಿತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.

ಕುಮಾರ್(27) ಎಂಬಾತ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಗುರುತಿಸಿದ್ದಾರೆ.

ನಗರದ ಹೊಂಗಸಂದ್ರ ನಿವಾಸಿಯಾಗಿರುವ ಕುಮಾರ್ ಗೆ ಸೋಂಕು ದೃಢಪಟ್ಟ ಹಿನ್ನೆಲೆ ಎ.25ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಮಧ್ಯಾಹ್ನ ನಾಲ್ಕನೇ ಮಹಡಿಯಿಂದ ಜಿಗಿದು ನೆಲಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ರಕ್ತಸ್ರಾವವಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕುಮಾರ್ ಗೆ ಚಿಕಿತ್ಸೆ ನೀಡಿದರೂ, ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ವಿವಿಪುರಂ ಠಾಣಾ ಪೊಲೀಸರು ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News