ಅಬ್ಬರಿಸಿದ ಪೃಥ್ವಿ ಶಾ: ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ ಭರ್ಜರಿ ಗೆಲುವು

Update: 2021-04-29 17:25 GMT

ಅಹಮದಾಬಾದ್: ಆರಂಭಿಕ ಬ್ಯಾಟ್ಸ್ ಮನ್ ಪೃಥ್ವಿ ಶಾ(82, 41 ಎಸೆತ)ಅಬ್ಬರದ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ  ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ನ 25ನೇ ಪಂದ್ಯವನ್ನು 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಗೆಲ್ಲಲು 155 ರನ್ ಗುರಿ ಪಡೆದ ಡೆಲ್ಲಿ 16.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿದೆ. ಶಾ(82, 41 ಎಸೆತ, 11 ಬೌಂಡರಿ, 3 ಸಿಕ್ಸರ್)ಹಾಗೂ ಶಿಖರ್ ಧವನ್(46, 47 ಎಸೆತ, 4 ಬೌಂ.,1 ಸಿ.)ಮೊದಲ ವಿಕೆಟ್ ಗೆ 13.5 ಓವರ್ ಗಳಲ್ಲಿ 132 ರನ್ ಗಳಿಸಿ ಭದ್ರ ಬುನಾದಿ ಹಾಕಿಕೊಟ್ಟರು. ಡೆಲ್ಲಿಯ ಭರ್ಜರಿ ಗೆಲುವಿಗೆ ಮುನ್ನುಡಿ ಬರೆದರು.

ಇದಕ್ಕೂಮೊದಲು ನಗರದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತಾ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ರಸೆಲ್(ಔಟಾಗದೆ 45, 27 ಎಸೆತ, 2 ಬೌಂ., 4 ಸಿ.)ಸರ್ವಾಧಿಕ ಸ್ಕೋರ್ ಗಳಿಸಿದರು. ಶುಭಮನ್ ಗಿಲ್(43), ತ್ರಿಪಾಠಿ(19)ಎರಡಂಕೆಯ ಸ್ಕೋರ್ ಗಳಿಸಿದರು.

ಬೌಲಿಂಗ್ ವಿಭಾಗದಲ್ಲಿ ಅಕ್ಷರ್ ಪಟೇಲ್(2-32) ಹಾಗೂ ಲಲಿತ್ ಯಾದವ್(2-13)ತಲಾ ಎರಡು ವಿಕೆಟ್ ಗಳನ್ನು ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News