ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಮುಖಭಂಗ: ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ
Update: 2021-04-30 15:22 IST
ಬಳ್ಳಾರಿ, ಎ.30: ರಾಜ್ಯ ಸರಕಾರ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ, ಸಚಿವ ಶ್ರೀರಾಮುಲು ಸಹಿತ ಪ್ರಮುಖರು ಭಾರೀ ಪ್ರಚಾರ ನಡೆಸಿದ್ದ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭಿಸಿದೆ.
39 ವಾರ್ಡ್‌ಗಳ ಪೈಕಿ 21 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಬಿಜೆಪಿ 13 ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್ ಟಿಕೆಟ್ ದೊರಕದೆ ಪಕ್ಷೇತರರಾಗಿ ಸ್ಪರ್ಧಿಸಿದ್ದ ಐವರು ಜಯಗಳಿಸಿದ್ದಾರೆ.
ಸೋಮಶೇಖರ ರೆಡ್ಡಿ ಪುತ್ರ ಸೋಲು: ಬಿಜೆಪಿ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರ ಪುತ್ರ ಜಿ.ಶ್ರವಣಕುಮಾರ್ ರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿ ನಂದೀಶ್ ವಿರುದ್ಧ 133 ಮತಗಳ ಅಂತರದಿಂದ ಸೋತಿದ್ದಾರೆ.