×
Ad

ಪ್ರತಿದಿನ ನಂದಿನಿ ಹಾಲು ಮಾರಾಟ ಮಳಿಗೆ ಓಪನ್: ಉಡುಪಿ ಡಿಸಿ

Update: 2021-04-30 21:33 IST

ಉಡುಪಿ, ಎ.30: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎ.27ರ ರಾತ್ರಿ 9ರಿಂದ ಮೇ 12ರ ಬೆಳಗ್ಗೆ 6 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂತೆ ಕಲಂ 144ರಡಿಯಲ್ಲಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ವಿಧಿಸಲಾಗಿದ್ದು, ಸರಕಾರದ ಆದೇಶದನ್ವಯ ಬದಲಾವಣೆ ಮಾಡಿ ಆದೇಶಿಸಲು ಸೂಚಿಸಿದ ಹಿನ್ನೆಲೆ ಸಾರ್ವಜನಿಕರ ಹಿತದೃಷ್ಟಿಯಿಂದ ಅತಿ ಅವಶ್ಯವೆಂದು ಕಂಡು ಬಂದ ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಅನುಮತಿ ಸಲಾಗಿದ್ದು, ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲು ಮಾರಾಟ ಮಳಿಗೆಗಳು ಬೆಳಗ್ಗೆ 6 ರಿಂದ ರಾತ್ರಿ 8 ಗಂಟೆಯವರೆಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಈ ಅದೇಶವನ್ನು ಪಾಲಿಸದೇ ಇದ್ದವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಐಪಿಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News