×
Ad

ದ.ಕ. ಜಿಲ್ಲೆ : 1,205 ಮಂದಿಗೆ ಕೊರೋನ ಸೋಂಕು; ಕೋವಿಡ್ ಗೆ ಓರ್ವ ಬಲಿ

Update: 2021-04-30 21:39 IST

ಮಂಗಳೂರು, ಎ.30: ದ.ಕ.ಜಿಲ್ಲೆಯಲ್ಲಿ ಕೊರೋನ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶುಕ್ರವಾರ 1,205 ಮಂದಿಗೆ ಕೊರೋನ ಪಾಸಿಟಿವ್ ಆಗಿದೆ. ಅಲ್ಲದೆ ಒಬ್ಬರು ಮೃತಪಟ್ಟಿದ್ದಾರೆ. ಇದರಿಂದ ಮೃತಪಟ್ಟವರ ಸಂಖ್ಯೆ 757ಕ್ಕೇರಿದೆ.

ದ.ಕ.ಜಿಲ್ಲೆಯಲ್ಲಿ ಗುರುವಾರ 1,175 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದರೆ, ಶುಕ್ರವಾರ ಅದರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಗುಣಮುಖರಾದ 380 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 45,109 ಮಂದಿ ಕೊರೋನ ಸೋಂಕಿಗೊಳಗಾಗಿದ್ದು, ಈ ಪೈಕಿ 37,866 ಮಂದಿ ಗುಣಮುಖರಾಗಿದ್ದಾರೆ. ಸದ್ಯ 6,486 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಜಿಲ್ಲೆಯ 7,39, 170 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದ್ದು, 6,94,061 ಮಂದಿಯ ವರದಿ ನೆಗೆಟಿವ್ ಬಂದಿದೆ.

ಜಪ್ಪಿನಮೊಗರು ಬಳಿಯ ಮನೆಯೊಂದರಲ್ಲಿ 5 ಮಂದಿಗೆ ಕೊರೋನ ದೃಢಪಟ್ಟಿದ್ದು, ಆ ಪ್ರದೇಶವನ್ನು ಕಂಟೈನ್ಮೆಂಟ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.

ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ 50,159 ಪ್ರಕರಣ ದಾಖಲಿಸಲಾಗಿದೆ. 52,47,430 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News