ಕೋವಿಡ್ ಸೋಂಕು: ಬಿಹಾರ ಮುಖ್ಯ ಕಾರ್ಯದರ್ಶಿ ನಿಧನ
Update: 2021-04-30 22:33 IST
ಪಾಟ್ನ, ಎ.30: ಬಿಹಾರದ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಸಿಂಗ್ ಕೋವಿಡ್ ಸೋಂಕಿನಿಂದ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.
ಕೋವಿಡ್ ಸೋಂಕು ದೃಢಪಟ್ಟ ಬಳಿಕ ಅರುಣ್ ಕುಮಾರ್ ರನ್ನು ಪಾಟ್ನದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದು ಮೃತರ ಅಂತ್ಯಸಂಸ್ಕಾರವನ್ನು ಸಂಪೂರ್ಣ ಸರಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
1985ರ ಪದ ವೃಂದದ ಅಧಿಕಾರಿಯಾಗಿರುವ ಸಿಂಗ್, ಈ ವರ್ಷದ ಫೆಬ್ರವರಿಯಲ್ಲಿ ಬಿಹಾರದ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು.