ಬೆಂಗಳೂರಿನಲ್ಲಿ ವಾರ್ಡ್ ವಾರು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ: ಹೈಕೋರ್ಟ್ ನಿರ್ದೇಶನ

Update: 2021-04-30 17:36 GMT

ಬೆಂಗಳೂರು, ಎ.30: ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನಂಪ್ರತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೌಮ್ಯ ಮತ್ತು ಮೃದು ಸ್ವರೂಪದ ಸೋಂಕಿತರ ಚಿಕಿತ್ಸೆಗೆ ವಾರ್ಡ್‍ವಾರು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ ಎಂದು ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಕೊರೋನ ನಿಯಂತ್ರಣ ಸಂಬಂಧ ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ತೀವ್ರ ಸೋಂಕು ಇಲ್ಲದವರೂ ಸಹ ಆಸ್ಪತ್ರೆ ಸೇರುತ್ತಿದ್ದಾರೆ. ಹೀಗಾಗಿ, ಬೆಡ್ ಕೊರತೆ ಎದುರಾಗುತ್ತಿದೆ. ಆದುದರಿಂದ, ಮನೆಗಳಲ್ಲಿ ಐಸೋಲೇಷನ್ ಸಾಧ್ಯವಾಗದವರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ನ್ಯಾಯಪೀಠ ತಿಳಿಸಿತು.

ಸೈನಿಕ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲ ಎಂದಿದ್ದಾರೆ. ವಿಪತ್ತುಗಳ ಸಂಭವಿಸಿದಾಗ ಸೇನೆ ಜನಸಾಮಾನ್ಯರ ನೆರವಿಗೆ ಧಾವಿಸುತ್ತದೆ. ಕೊರೋನ ಸಹ ವಿಪತ್ತಿನ ಸ್ಥಿತಿ ತಂದಿದೆ. ಬೆಂಗಳೂರಿನ ಸೋಂಕಿತರ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ, ಬೆಂಗಳೂರಿನಲ್ಲೂ ಸೇನಾ ಆಸ್ಪತ್ರೆಗಳಲ್ಲಿ ಹೆಚ್ಚುವರಿ ಬೆಡ್ ಸೃಷ್ಟಿಸಲು ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ಸೇನೆಗೆ ಮನವಿ ಮಾಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News