×
Ad

ಜಿಲ್ಲಾ ಪಂ., ತಾಲೂಕು ಪಂ. ಗಳಿಗೆ ಮೀಸಲಾತಿ ಪ್ರಕಟಿಸಿದ ರಾಜ್ಯ ಚುನಾವಣಾ ಆಯೋಗ

Update: 2021-04-30 23:07 IST

ಬೆಂಗಳೂರು, ಎ. 30: ರಾಜ್ಯದಲ್ಲಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿದಂತೆ 31 ಜಿಲ್ಲೆಗಳ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳಾ ಮೀಸಲಾತಿ ಪ್ರಕಟಿಸಿ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 161 ಮತ್ತು 162ರಲ್ಲಿ ಪ್ರದತ್ತ ಅಧಿಕಾರ ಚಲಾಯಿಸಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳಿಗೆ ಮೀಸಲಾತಿ ಪ್ರಕಟಿಸಲಾಗಿದೆ ಎಂದು ಆಯೋಗ ರಾಜ್ಯಪತ್ರದಲ್ಲಿ ಪ್ರಕಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News