ಉಪ ಚುನಾವಣೆ: ಮಸ್ಕಿಯಲ್ಲಿ ಬಸನಗೌಡ, ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಆರಂಭಿಕ ಮುನ್ನಡೆ

Update: 2021-05-02 03:25 GMT

ಬೆಂಗಳೂರು, ಮೇ 2: ರಾಜ್ಯದ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ಪ್ರತಿಷ್ಠೆ ಮತ್ತು

ಪೈಪೋಟಿ ಸೃಷ್ಟಿಸಿರುವ ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ಜಿಲ್ಲೆಯ ಬಸವಕಲ್ಯಾಣ ಹಾಗೂ ರಾಯಚೂರು

ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ.

ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಅವರು ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ವಿರುದ್ಧ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಎರಡನೇ ಸುತ್ತಿನ ಮುಕ್ತಾಯಕ್ಕೆ ಬಸನಗೌಡ 287 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅದೇರೀತಿಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ 664 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಇನ್ನೂ ಬಸವ ಕಲ್ಯಾಣದಲ್ಲಿ ಮತ ಎಣಿಕೆ ಕಾರ್ಯ ವಿಳಂಬವಾಗಿ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ ಶರಣು ಸಲಗರ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News