ಕೋವಿಡ್ ಬಗ್ಗೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಲು ಸಭೆ ನಡೆಸಿದ ಪ್ರಧಾನಿ ಮೋದಿ

Update: 2021-05-02 05:02 GMT

ಹೊಸದಿಲ್ಲಿ: ದೇಶದ ಆರೋಗ್ಯ ವ್ಯವಸ್ಥೆಯನ್ನು ಅಲ್ಲೋಕಲ್ಲೋಲ ಮಾಡಿರುವ  ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಳಿಗ್ಗೆ ಸಭೆ ನಡೆಸಿದರು.

ಮಾನವ ಸಂಪನ್ಮೂಲ ಹಂಚಿಕೆ ಜೊತೆಗೆ ಆಮ್ಲಜನಕ ಮತ್ತು ಔಷಧಿಗಳ ಲಭ್ಯತೆಯ ಬಗ್ಗೆ ಪ್ರಧಾನಿ ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್, ಆರೋಗ್ಯ ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ.

ಕೋವಿಡ್-19 ಪ್ರಕರಣಗಳ ಉಲ್ಬಣದಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಆರೋಗ್ಯ ಸಿಬ್ಬಂದಿಗಳು ವಿಪರೀತ ಒತ್ತಡ ಎದುರಿಸುತ್ತಿದ್ದಾರೆ. ಪರೀಕ್ಷಾ ಸೌಲಭ್ಯಗಳು ಸಹ ತೊಂದರೆಗೊಳಗಾಗಿವೆ ಎಂಬ ವರದಿಗಳ ಮಧ್ಯೆ ಈ ಸಭೆ ನಡೆಯುತ್ತಿದೆ.

ಶನಿವಾರ, ದಿಲ್ಲಿಯ ಬಾತ್ರಾ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಸಾವನ್ನಪ್ಪಿದ 12 ಜನರಲ್ಲಿ ವೈದ್ಯರೊಬ್ಬರು ಸೇರಿದ್ದಾರೆ. ಒಂದು ವಾರದ ಅವಧಿಯಲ್ಲಿ ಎರಡನೇ ಬಾರಿಗೆ ರಾಜಧಾನಿಯ ಖಾಸಗಿ ಆಸ್ಪತ್ರೆಯ ನಿವಾಸಿ ವೈದ್ಯರೊಬ್ಬರು ತೀವ್ರ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News