ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ: ರಾಜ್ಯದಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ

Update: 2021-05-02 13:35 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 2: ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಎದ್ದಿರುವುದರಿಂದ ಮುಂದಿನ ಮೂರು ದಿನಗಳವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿ ಸುಳಿಗಾಳಿ ಹಾಗೂ ಮಹಾರಾಷ್ಟ್ರದಲ್ಲಿ ಟ್ರಪ್ ಆಗಿರುವುದರಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುಖ್ಯಾಧಿಕಾರಿ ಶ್ರೀನಿವಾಸ ರೆಡ್ಡಿ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News