ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಶೇ. 75 ಬೆಡ್‌ಗಳು ಮೀಸಲು: ದ.ಕ. ಜಿಲ್ಲಾಧಿಕಾರಿ
ಮಂಗಳೂರು, ಮೇ 2: ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ದೃಷ್ಟಿಯಿಂದ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಲಭ್ಯವಿರುವ ಒಟ್ಟು ಬೆಡ್‌ಗಳ ಪೈಕಿ ಶೇ. 50ರಷ್ಟು ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಶೇ. 75ರಷ್ಟು ಬೆಡ್‌ಗಳನ್ನು ಕೋವಿಡ್ ಪ್ರಕರಣಗಳಿಗೆ ಕಾಯ್ದಿರಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಈಗಾಗಲೇ ಕೋವಿಡ್ ಪಾಸಿಟಿವ್ ರೋಗಿಗಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚ್ಚುವ ಕಾರಣದಿಂದ ಈ ಕ್ರಮ ಕೈಗೊಂಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸಾರ್ವಜನಿಕರು ಈ ಕೆಳಗಿನ ಆಸ್ಪತ್ರೆಗಳಲ್ಲಿ ಕೋವಿಡ್‌ಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತಿಳಿಸಲಾದ ನೋಡಲ್ ಅಧಿಕಾರಿಗಳನ್ನು ಸಂಪಕಿಸಬಹುದು. ಉಳ್ಳಾಲ ಸಹಾರ ಆಸ್ಪತ್ರೆ- ನಿರಂಜನ್, ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು, ಸಂಪರ್ಕ ಸಂಖ್ಯೆ- 9591225763
ತೇಜಸ್ವಿನಿ ಆಸ್ಪತ್ರೆ ಕದ್ರಿ- ಪ್ರವೀಣ್- ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕಾ ಇಲಾಖೆ- ಸಂಪರ್ಕ ಸಂಖ್ಯೆ 9449258204