ಉಡುಪಿ ಜಿಲ್ಲೆಯಲ್ಲಿ 653 ಮಂದಿಗೆ ಕೊರೋನ ಪಾಸಿಟಿವ್
ಉಡುಪಿ, ಮೇ 2: ಜಿಲ್ಲೆಯಲ್ಲಿ ಕೋವಿಡ್-19ರ ಅಬ್ಬರ ಇನ್ನೂ ಏರುಗತಿಯಲ್ಲೇ ಸಾಗುತಿದ್ದು, ರವಿವಾರ ಒಟ್ಟು 653 ಮಂದಿ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 788 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಸದ್ಯ ಜಿಲ್ಲೆಯಲ್ಲಿ 2508 ಮಂದಿ ಸೋಂಕಿಗೆ ಸಕ್ರಿಯರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದ 653 ಮಂದಿಯಲ್ಲಿ 332 ಮಂದಿ ಪುರುಷ ರಾದರೆ, 321 ಮಂದಿ ಮಹಿಳೆಯರು. ಇವರಲ್ಲಿ 347 ಮಂದಿ ಉಡುಪಿ ತಾಲೂಕಿನವರು. ಉಳಿದಂತೆ 200 ಮಂದಿ ಕುಂದಾಪುರ ಹಾಗೂ 104 ಮಂದಿ ಕಾರ್ಕಳ ತಾಲೂಕಿನವರು. ಹೊರಜಿಲ್ಲೆಗಳಿಂದ ವಿವಿಧ ಕಾರಣ ಗಳಿಗಾಗಿ ಆಗಮಿಸಿದ ಇಬ್ಬರು ಇಲ್ಲಿ ಕೋವಿಡ್ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ.
ಶನಿವಾರ 788 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 29,916 ಕ್ಕೇರಿದೆ. ನಿನ್ನೆ ಜಿಲ್ಲೆಯ 2926 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇಂದಿನ 653 ಮಂದಿ ಸೇರಿ ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 32,625 ಆಗಿದೆ ಎಂದು ಡಾ.ಸೂಡ ತಿಳಿಸಿದರು.
ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 5,09,606 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.
284 ಮಂದಿಯಿಂದ ಲಸಿಕೆ: ಕೊರೋನ ವಿರುದ್ಧದ ಲಸಿಕೆಯನ್ನು ಜಿಲ್ಲೆಯಲ್ಲಿ ಇಂದು 284 ಮಂದಿ ಸ್ವೀಕರಿಸಿದ್ದಾರೆ. ಇವರಲ್ಲಿ 175 ಮಂದಿ ಮೊದಲ ಡೋಸ್ ಪಡೆದರೆ, 109 ಮಂದಿಗೆ ಎರಡನೇ ಡೋಸ್ ನೀಡಲಾಗಿದೆ. ಜಿಲ್ಲೆಯಲ್ಲಿ 45 ವರ್ಷ ಮೇಲಿನ ಒಟ್ಟು 273 ಮಂದಿ ಇಂದು ಲಸಿಕೆಯನ್ನು ಸ್ವೀಕರಿಸಿದ್ದು, ಇವರಲ್ಲಿ 172 ಮಂದಿ ಮೊದಲ ಡೋಸ್‌ನ್ನೂ, 101 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. ಅಲ್ಲದೇ ಇಂದು 9 ಮಂದಿ ಆರೋಗ್ಯ ಕಾರ್ಯಕರ್ತ ರು ಹಾಗೂ ಇಬ್ಬರು ಮುಂಚೂಣಿ ಯೋಧರು ಸಹ ಲಸಿಕೆ ಪಡೆದಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 1,93,030 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 54,176 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.