ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ಸಚಿವರಾದ ಡಾ.ಸುಧಾಕರ್, ಸುರೇಶ್ ಕುಮಾರ್ ಭೇಟಿ

Update: 2021-05-03 09:24 GMT

ಚಾಮರಾಜನಗರ, ಮೇ 3: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ  23 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ಇಂದು ಅಪರಾಹ್ನ ಆಗಮಿಸಿದ್ದಾರೆ.

ಅಪರಾಹ್ನ 2 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿದ ಇಬ್ಬರು ಸಚಿವರು ನೇರವಾಗಿ ಕೋವಿಡ್ ಆಸ್ಪತ್ರೆಗೆ ತೆರಳಿ ಅಲ್ಲಿನ ವೈದ್ಯಾಧಿಕಾರಿಗಳ ಕೊಠಡಿಯಲ್ಲಿ ವೈದ್ಯರು ಮತ್ತು ಜಿಲ್ಲಾಧಿಕಾರಿಯೊಂದಿಗೆ ಸಭೆಗೆ ಮುಂದಾದರು.

ಈ ಸಭೆಯಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸ್ಥಳೀಯ ಶಾಸಕ ಸಿ. ಪುಟ್ಟರಂಗಶೆಟ್ಟಿ, ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ, ಮೆಡಿಕಲ್ ಕಾಲೇಜಿನ ಡೀನ್ ಡಾ.ಸಂಜೀವ, ಪೊಲೀಸ್ ವರಿಷ್ಠಾಧಿಕಾರಿ ದಿವ್ಯಸಾರಾ ಥಾಮಸ್ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News