ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ

Update: 2021-05-03 16:59 GMT

ಬೆಳ್ತಂಗಡಿ : ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಅವರು ಸೇವಾ ಸಹಕಾರಿ ಬ್ಯಾಂಕಿನ ಕಟ್ಟಡದಲ್ಲಿಯೇ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇವರು ಇಂದು ಬೆಳಗ್ಗೆ ಸೊಸೈಟಿಗೆ ಬಂದವರು ಸ್ವಲ್ಪ ಸಮಯದ ಬಳಿಕ ಕಾಣಿಸಲಿಲ್ಲ ಎನ್ನಲಾಗಿದ್ದು, ಅವರ ಮೊಬೈಲಿಗೆ ಕರೆ ಮಾಡಿದಾಗ ಸೊಸೈಟಿಯ ಸಭಾಭವನದಲ್ಲಿ ರಿಂಗ್ ಆಗುತ್ತಿರುವುದು ಗಮನಿಸಿ ನೋಡಿದಾಗ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅವರ ಪತ್ನಿ ಸಂಘದಲ್ಲಿ ಇಬ್ಬರು ನಿರ್ದೇಶಕರು ಅವರಿಗೆ ಕಿರುಕುಳ ನೋಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಇವತ್ತೇ ವಿಆರ್ ಎಸ್ ತೆಗೆದುಕೊಂಡು ಕೆಲಸ ಬಿಡಬೇಕು ಎಂದು ಒತ್ತಡ ಹೇರುತ್ತಿದ್ದರು ಎಂದು ಅವರು ದೂರಿದ್ದಾರೆ.

ಸಮಗ್ರ ತನಿಖೆಗೆ ಮಾಜಿ ಶಾಸಕ ಬಂಗೇರ ಒತ್ತಾಯ : ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ರವೀಂದ್ರ ಅವರ ಆತ್ಮಹತ್ಯೆ ಪ್ರಕರಣದ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕು. ಯಾವ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಹಿರಂಗಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News