ಚಾಮರಾಜನಗರ ಘಟನೆ ಸರಕಾರದ ದುರಾಡಳಿತಕ್ಕೆ ಸಾಕ್ಷಿ: ಡಿವೈಎಫ್‌ಐ ಆರೋಪ

Update: 2021-05-03 17:03 GMT

ಮಂಗಳೂರು, ಮೇ 3: ಚಾಮರಾಜನಗರ ಜಿಲ್ಲೆಯಲ್ಲಿ ಆಮ್ಲಜನಕ ದೊರೆಯದೆ 24 ಸಾವುಗಳು ಸಂಭವಿಸಿರುವುದು ಸರಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ. ಸರಕಾರದ ಈ ನಿರ್ಲಕ್ಷ್ಯ ಖಂಡನೀಯ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮತ್ತು ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

24 ಮಂದಿಯ ಸಾವುಗಳಿಗೆ ಸರಕಾರವೇ ನೇರ ಹೊಣೆಗಾರನಾಗಿದೆ. ಉನ್ನತ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ತನಿಖೆ ನಡೆಸುವುದಾಗಿ ಸರಕಾರ ಹೇಳಿರುವುದು ತನ್ನ ಹೊಣೆಗಾರಿಕೆಯನ್ನು ಮುಚ್ಚಿಟ್ಟುಕೊಳ್ಳುವ ದುರುಳ ತಂತ್ರವಾಗಿದೆ. ತಕ್ಷಣ ಈ ಪ್ರಕರಣವನ್ನು ಸ್ವತಂತ್ರವಾದ ಉನ್ನತ ನ್ಯಾಯಾಂಗ ತನಿಖೆಗೊಳಪಡಿಸಿ ನೈಜ ಅಪರಾಧಿಗಳನ್ನು ಶಿಕ್ಷಿಸಲು ಅಗತ್ಯ ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿಯನ್ನು ಆಗ್ರಹಿಸಿರುವ ಅವರು ಸಾವಿಗೀಡಾದ ಕುಟುಂಬಗಳಿಗೆ ತಕ್ಷಣ ರಾಜ್ಯ ಸರಕಾರ 10 ಲಕ್ಷ ರೂ.ಗಳ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News