ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನ

Update: 2021-05-04 06:14 GMT

ಮಂಗಳೂರು: ಬ್ರಹ್ಮಾವರ ನಿವಾಸಿ, ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮಂಗಳೂರು ವಿ.ವಿ.ಯಲ್ಲಿ ಸಮೂಹ‌ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.

ಅವರು ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಕೆಲ ಕಾಲ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯಸ್ಥರಾಗಿದ್ದರು. ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದ ಹಳೆ ವಿದ್ಯಾರ್ಥಿಗಳ ಸಂಘ 'ಎಂಎಎಎಂ' ಇದರ ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು.

ಅವರು ಪತ್ನಿ, ಪುತ್ರಿ ಹಾಗು ಬಂಧುಬಳಗವನ್ನು ಅಗಲಿದ್ದಾರೆ.

ಸಂತಾಪ: ಸುರೇಂದ್ರ ಶೆಟ್ಟಿ ನಿಧನಕ್ಕೆ ಮೀಡಿಯಾ ಅಲ್ಯುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ (ಎಂಎಎಎಂ) ಇದರ ಗೌರವಾಧ್ಯಕ್ಷ ವೇಣು ಶರ್ಮ ಸಹಿತ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. ಸಂಘಟನೆಯ ಆರಂಭದ ದಿನಗಳಿಂದಲೂ ಅವರ ಸಹಭಾಗಿತ್ವ ಮತ್ತು ಮಾರ್ಗದರ್ಶನವನ್ನು ವೇಣು ಶರ್ಮ ಸ್ಮರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News