​ಕಂಗನಾ ರಣಾವತ್ ಖಾತೆಯನ್ನು ಖಾಯಂ ಸ್ಥಗಿತಗೊಳಿಸಿದ ಟ್ವಿಟರ್

Update: 2021-05-04 10:23 GMT

ಹೊಸದಿಲ್ಲಿ: ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿದ್ದಕ್ಕೆ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಟ್ವಿಟರ್ ಖಾತೆಯನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿದೆ. ಈ ಖಾತೆಯು ಪದೇ ಪದೇ ಟ್ವಿಟರ್ ನೀತಿಯನ್ನು ಉಲ್ಲಂಘಿಸಿದೆ ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ಹೇಳಿದೆ ಎಂದು ndtv.com ವರದಿ ಮಾಡಿದೆ.

ಸರಣಿ ಟ್ವೀಟ್ ಗಳನ್ನು ಮಾಡಿದ್ದ ರಣಾವತ್, ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. 

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇತ್ತೀಚೆಗೆ ಪ.ಬಂಗಾಳದಲ್ಲಿ ನಡೆದ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿತ್ತು. ಆದಾಗ್ಯೂ ಕಂಗನಾ ಅವರು ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಒತ್ತಾಯಿಸಿದ್ದರು. 

ಬಿಜೆಪಿ ಜಯ ಸಾಧಿಸಿರುವ ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಹಿಂಸಾಚಾರ ನಡೆದಿಲ್ಲ. ಆದರೆ ಬಂಗಾಳದಲ್ಲಿ ಬೆಂಕಿ ಬಿದ್ದಿದ್ದು, ನೂರಾರು ಜನರು ಹತ್ಯೆಯಾಗಿದ್ದಾರೆ ಎಂದು ಕಂಗನಾ ಟ್ವೀಟ್ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News