ಐಪಿಎಲ್ ಪಂದ್ಯಾವಳಿಗೆ ತಡೆ: ಬಿಸಿಸಿಐ

Update: 2021-05-04 13:55 GMT

ಮುಂಬೈ, ಮೇ 4: ಹಲವು ಆಟಗಾರರು, ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ ಎಂದು ವರದಿಯಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಆಡಳಿತ ಮಂಡಳಿ(ಐಪಿಎಲ್ ಜಿಸಿ)ಹಾಗೂ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ತುರ್ತು ಸಭೆ ಸೇರಿ ತಕ್ಷಣವೇ ಜಾರಿಗೆ ಬರುವಂತೆ 2021ರ ಆವೃತ್ತಿಯ ಐಪಿಎಲ್ ಪಂದ್ಯಾವಳಿಯನ್ನು ಮುಂದೂಡಲು ಒಮ್ಮತದ ನಿರ್ಧಾರ ತೆಗೆದುಕೊಂಡಿದೆ ಎಂದು ಬಿಸಿಸಿಐ ಪ್ರಕಟನೆಯೊಂದರಲ್ಲಿ ತಿಳಿಸಿದೆ.

ಐಪಿಎಲ್ ಆಯೋಜನೆಯಲ್ಲಿ ಭಾಗಿಯಾಗಿರುವ ಆಟಗಾರರು, ಸಹಾಯಕ ಸಿಬ್ಬಂದಿ ಹಾಗೂ ಇತರರ ಸುರಕ್ಷತೆಯಲ್ಲಿ ರಾಜಿ ಮಾಡಿಕೊಳ್ಳಲು ಬಿಸಿಸಿಐ ಬಯಸುವುದಿಲ್ಲ. ಎಲ್ಲ ಪಾಲುದಾರರ ಸುರಕ್ಷತೆ, ಆರೋಗ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಸಿಸಿಐ ಪ್ರಕಟನೆಯೊಂದರಲ್ಲಿ ತಿಳಿಸಿದೆ.

ಕೋಲ್ಕತಾ ನೈಟ್ ರೈಡರ್ಸ್‍ನ ಇಬ್ಬರು ಆಟಗಾರರಾದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿ, ಸಿಎಸ್‍ಕೆ ಪ್ರಯಾಣದ ತಂಡ, ಸಹಾಯಕ ಸಿಬ್ಬಂದಿ ಸಹಿತ ಹಲವರಿಗೆ ಕೊರೋನ ವೈರಸ್ ಸೋಂಕು ತಗಲಿತ್ತು.  ಐಪಿಎಲ್ ಶಿಷ್ಟಾಚಾರದ ಪ್ರಕಾರ ಸಿಎಸ್‍ಕೆ ತಂಡವನ್ನು ಪ್ರತ್ಯೇಕವಾಗಿಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News