ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಸಂತಾಪ

Update: 2021-05-04 08:35 GMT

ಬೆಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥನಾರಾಯಣ ಅವರು ಸಂತಾಪ ಸೂಚಿಸಿದ್ದಾರೆ.

ಕನ್ನಡಪ್ರಭ ಪತ್ರಿಕೆಯ ಮಂಗಳೂರು ಬ್ಯೂರೊ ಮುಖ್ಯಸ್ಥರಾಗಿದ್ದ ಸುರೇಂದ್ರ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಬಹಳ ಬೇಸರವಾಯಿತು. ಸೌಮ್ಯ ಸ್ವಭಾವದ ಸುರೇಂದ್ರ ಶೆಟ್ಟಿ ಅವರು, ಅತ್ಯುತ್ತಮ ಪತ್ರಕರ್ತರಾಗಿದ್ದರು ಮಾತ್ರವಲ್ಲ ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯ ಕರ್ನಾಟಕ, ವಾರ್ತಾಭಾರತಿ ಮತ್ತಿತರೆ ಪತ್ರಿಕೆಗಳಲ್ಲಿ ಕೆಲಸ ಮಾಡಿ ಅನೇಕ ಯುವ ಪತ್ರಕರ್ತರಿಗೆ ಮಾರ್ಗದರ್ಶನ ನೀಡಿದ್ದರು ಎಂದು ಅವರು ತಿಳಿಸಿದ್ದಾರೆ.

ಮೃತರ ಅಗಲಿಕೆಯನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಹಾಗೂ ಅವರ ಸಹಪಾಠಿಗಳಿಗೆ ಭಗವಂತ ನೀಡಲಿ ಎಂದು ಡಿಸಿಎಂ ಅವರು ಪ್ರಾರ್ಥಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News