ಬಂಗಾಳ ರಾಜ್ಯಪಾಲರಿಗೆ ಪ್ರಧಾನಿ ದೂರವಾಣಿ ಕರೆ: ಚುನಾವಣೋತ್ತರ ಹಿಂಸಾಚಾರಕ್ಕೆ ಕಳವಳ

Update: 2021-05-04 09:31 GMT

ಹೊಸದಿಲ್ಲಿ: ರಾಜ್ಯದ ರಾಜಕೀಯ ಹಿಂಸಾಚಾರ ಹಾಗೂ ಮತ ಎಣಿಕೆಯ ನಂತರ ಹದಗೆಟ್ಟಿರುವ ಕಾನೂನು ಹಾಗೂ ಸುವ್ಯವಸ್ಥೆಯ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮಬಂಗಾಳದ ರಾಜ್ಯಪಾಲರಿಗೆ ದೂರವಾಣಿ ಕರೆ ಮಾಡಿದ್ದಾರೆ.

ಚುನಾವಣೋತ್ತರ ಹಿಂಸಾಚಾರದಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. 

ಕಾನೂನು ಹಾಗೂ ಸುವ್ಯವಸ್ಥೆಯ ಆತಂಕಕಾರಿಯಾದ ಬಗ್ಗೆ ಪ್ರಧಾನಿ ಗಂಭೀರ ದುಃಖ ಹಾಗೂ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ರಾಜ್ಯಪಾಲ ಜಗದೀಪ್ ಧಂಕರ್ ಟ್ವೀಟಿಸಿದ್ದಾರೆ.

ಬಂಗಾಳ ಹಿಂಸಾಚಾರದ ಬಗ್ಗೆ ಕೇಂದ್ರೀಯ ತನಿಖಾ ದಳ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡರು ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಬಿಜೆಪಿ ಕಾರ್ಯಕತರ ಮೇಲೆ ಹಲ್ಲೆ ನಡೆಸಿ ಕೊಲ್ಲಲಾಗಿದೆ. ಮಹಿಳೆಯರ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News