ಮಂಗಳೂರು ವಿವಿ: ಮೇ 10ರಿಂದ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಕ್ಲಾಸ್

Update: 2021-05-04 12:10 GMT
ಸಾಂದರ್ಭಿಕ ಚಿತ್ರ

ಮಂಗಳೂರು : ಕೋವಿಡ್ ಭೀತಿ ಹೆಚ್ಚಾಗಿರುವುದರಿಂದ ಇನ್ನು ಮುಂದೆ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಲು ಮಂಗಳೂರು ವಿಶ್ವ ವಿದ್ಯಾನಿಲಯ ನಿರ್ಧರಿಸಿದೆ.

ಈ ಸಂಬಂಧ ಮಂಗಳವಾರ ಆನ್‌ಲೈನ್ ಮೂಲಕ ಪ್ರಾಂಶುಪಾಲರುಗಳ ಸಭೆ ನಡೆದಿದ್ದು, ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಮೇ 10ರಿಂದ ಸ್ನಾತಕ ಕಾರ್ಯಕ್ರಮಗಳ ದ್ವಿತೀಯ, ಚತುರ್ಥ ಮತ್ತು ಆರನೇ ಸೆಮಿಸ್ಟರ್‌ಗಳ ತರಗತಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರುಗಳು ಮೇ 10ರಿಂದ ಆನ್‌ಲೈನ್ ತರಗತಿಗಳನ್ನು ನಡೆಸಲು ಸೂಕ್ತ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.

ಮುಂದೂಡಲ್ಪಟ್ಟ ಉಳಿದಿರುವ ಪಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳ ದಿನಾಂಕವನ್ನು ಸರ್ಕಾರದಿಂದ ಭೌತಿಕ ತರಗತಿಗಳನ್ನು ನಡೆಸಲು ಅನುಮತಿ ದೊರೆತ ಬಳಿಕ ಪ್ರಕಟಿಸಲಾಗುವುದು ಎಂದು ಮಂಗಳೂರು ವಿವಿಯ ಕುಲಸಚಿವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News