ಮೈಸೂರು- ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ, ಆಸ್ಪತ್ರೆಯ ದಾಖಲೆಗಳನ್ನು ಸೀಜ್ ಮಾಡಲು ಹೈಕೋರ್ಟ್ ಆದೇಶ

Update: 2021-05-05 08:58 GMT

ಬೆಂಗಳೂರು, ಮೇ 5: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೋನ ಸೋಂಕಿತರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿ ಚಾಮರಾಜನಗರ ಜಿಲ್ಲಾಸ್ಪತ್ರೆ, ಚಾಮರಾಜನಗರ ಮತ್ತು ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿನ ಎಲ್ಲ ದಾಖಲೆಗಳನ್ನು ತಕ್ಷಣ ವಶಕ್ಕೆ ಪಡೆಯುವಂತೆ ರಾಜ್ಯ ಹೈಕೋರ್ಟ್ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.

ವಶಕ್ಕೆ ತೆಗೆದುಕೊಂಡಿರುವ ದಾಖಲೆಗಳನ್ನು ಸರಕಾರ ನೇಮಿಸಿದ ತನಿಖಾಧಿಕಾರಿ ಪರಿಶೀಲಿಸಬಹುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಚಾಮರಾಜ ನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ರವಿವಾರ ಸಂಜೆಯಿಂದ ಸೋಮವಾರ ಬೆಳಗ್ಗಿನ ಅವಧಿಯಲ್ಲಿ 24 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದರು. 

ಚಾಮರಾಜನಗರಕ್ಕೆ ಮೈಸೂರು ಜಿಲ್ಲೆಯಿಂದ ಆಕ್ಸಿಜನ್ ಪೂರೈಕೆ ಆಗುತ್ತಿದ್ದು, ಈ ಬಗ್ಗೆ ಗೊಂದಲ, ಆರೋಪ-ಪ್ರತ್ಯಾರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ತನಿಖೆಗೆ ಪೂರಕವಾಗಿ ಹೈಕೋರ್ಟ್ ಈ ಮಹತ್ದದ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಗೆ ಈಗಾಗಲೇ ಸರಕಾರವು ವಿಚಾರಣಾಧಿಕಾರಿಯನ್ನು ನೇಮಕಗೊಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News