ಉಡುಪಿ: ಪಡಿತರ ಚೀಟಿ ಸಂಖ್ಯೆಗಳ ಬದಲಾವಣೆ ಕುರಿತು

Update: 2021-05-05 14:00 GMT

ಉಡುಪಿ, ಮೇ 5: ಪಡಿತರ ಚೀಟಿಯಲ್ಲಿ ಅಕ್ಷರ ಅಂಕೆಯ ಅಥವಾ 12 ಅಂಕಿಗಳಿಗಿಂತ ಭಿನ್ನವಾದ ಸಂಖ್ಯೆ ನೀಡಿರುವ ಪಡಿತರ ಚೀಟಿಗಳಿಗೆ (ಉದಾ: ಯುಡಿಪಿ1234567, ಎಂಎನ್‌ಜಿ12345678) ಇದೀಗ 12 ಅಂಕಿಗಳ ಹೊಸ ಸಂಖ್ಯೆಯನ್ನು ನೀಡಲಾಗಿದೆ.

ಸಾರ್ವಜನಿಕರು ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ, ತಮ್ಮ ಪಡಿತರ ಚೀಟಿ/ಆಧಾರ್ ಅಥವಾ ಪಡಿತರ ಚೀಟಿ ಸಂಖ್ಯೆ ನೀಡಿದಾಗ ಬದಲಾಗಿರುವ ಪಡಿತರ ಚೀಟಿ ಸಂಖ್ಯೆಯನ್ನು ನೀಡಲು ಮತ್ತು ನಿಮ್ಮ ಪಡಿತರ ಚೀಟಿಯ ಮೇಲೆ ಬರೆಯಲು ನ್ಯಾಯಬೆಲೆ ಅಂಗಡಿ ಗಳಿಗೆ ಈಗಾಗಲೇ ಸೂಚಿಸಲಾಗಿದೆ. ಸಾರ್ವಜನಿಕರು ಇನ್ನು ಮುಂದೆ ಬದಲಾಗಿರುವ ಹೊಸ ಪಡಿತರ ಚೀಟಿ ಸಂಖ್ಯೆಯನ್ನು ಬಳಸಲು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳನ್ನು ಸಂಪರ್ಕಿಸಲು ಕೋರಿದ್ದು, ಈ ವಿಷಯವಾಗಿ ಯಾವುದೇ ಸಮಸ್ಯೆಗಳಿದ್ದಲ್ಲಿ ತಾಲೂಕಿನ ಆಹಾರ ಶಿರಸ್ತೇದಾರ್/ಆಹಾರ ನಿರೀಕ್ಷಕರನ್ನು ಸಂಪರ್ಕಿಸಬಹುದು. ಅಲ್ಲದೇ ಯಾವುದೇ ದೂರುಗಳಿದ್ದಲ್ಲಿ ಆಹಾರ ಇಲಾಖೆಯ ಸಹಾಯವಾಣಿ ಸಂಖ್ಯೆ:1967ಕ್ಕೆ ಕರೆ ಮಾಡಬಹುದು ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News