ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತ: ನ್ಯಾಯಾಂಗ ತನಿಖೆಗೆ ರಾಜ್ಯ ಸರಕಾರ ಆದೇಶ

Update: 2021-05-05 15:34 GMT

ಬೆಂಗಳೂರು, ಮೇ 5: ಚಾಮರಾಜನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 24 ಮಂದಿ ಕೊರೋನ ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ನಿರ್ದೇಶನದಂತೆ ರಾಜ್ಯ ಸರಕಾರವು ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರ ಏಕಸದಸ್ಯ ಆಯೋಗವು ಈ ದುರಂತಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಿ ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.

ಚಾಮರಾಜನಗರ ದುರಂತಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ಕಾಂಗ್ರೆಸ್ ಆಗ್ರಹಿಸಿತ್ತು. ಆದರೆ, ರಾಜ್ಯ ಸರಕಾರವು ಐಎಎಸ್ ಅಧಿಕಾರಿ ಶಿವಯೋಗಿ ಕಳಸದ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿತ್ತು. ಇದೀಗ ಹೈಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News