ಉಡುಪಿ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಭಾಸ್ಕರ ಮಯ್ಯ ನಿಧನ

Update: 2021-05-06 03:53 GMT

ಉಡುಪಿ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಖ್ಯಾತ ವೈಚಾರಿಕ ಸಾಹಿತಿ ಉಡುಪಿಯ ಡಾ. ಜಿ.ಭಾಸ್ಕರ್ ಮಯ್ಯ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.

ಕಳೆದ 4 ದಿನಗಳಿಂದ ಅವರು ಬ್ರಹ್ಮಾವರದ ಪ್ರಣವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಡಾ.ಜಿ.ಭಾಸ್ಕರ್ ಮಯ್ಯ ಅವರು ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್ ಆಗಿ ಕೆಲಸ ನಿರ್ವಹಿಸಿದ್ದರು. ವೈಚಾರಿಕ ಹಾಗೂ ಪ್ರಗತಿಪರ ಸಾಹಿತ್ಯದಲ್ಲಿ 50ಕ್ಕೂ ಹೆಚ್ಚು ಗ್ರಂಥ ರಚಿಸಿದ್ದ ಭಾಸ್ಕರ್ ಮಯ್ಯ ಅವರ ನಿಧನಕ್ಕೆ ಸಾಹಿತ್ಯ ಲೋಕ ಕಂಬನಿ ಮಿಡಿದಿದೆ.

ಹಿಂದಿಯ ಸಾಕಷ್ಟು ಪ್ರಸಿದ್ಧ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು. ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಮೇರು ವ್ಯಕ್ತಿತ್ವ ಹೊಂದಿದ್ದ ಡಾ.ಜಿ.ಭಾಸ್ಕರ್ ಮಯ್ಯ ಅವರ ವೈಚಾರಿಕ ಕೃತಿಗೆ ಕೇಂದ್ರ ಸರ್ಕಾರ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಭಾಸ್ಕರ್ ಮಯ್ಯ ಅವರು ಅಪಾರ ಬಂಧು ಮಿತ್ರ ರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News