ಸಚಿವರು,ಜಿಲ್ಲಾಧಿಕಾರಿ,ಆರೋಗ್ಯಾಧಿಕಾರಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಕೋರಿ ಸುಪ್ರೀಂಕೋರ್ಟ್ ನ್ಯಾಯವಾದಿಯಿಂದ ದೂರು

Update: 2021-05-06 05:38 GMT
ಎ. ರಮೇಶ್

ಚಾಮರಾಜನಗರ : ಆಮ್ಲಜನಕ ಕೊರತೆಯಿಂದ ಕೊರೋನ ಸೋಂಕಿತರು ಮೃತಪಟ್ಟಿರುವುದಕ್ಕೆ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಸಚಿವರಾದ ಸುರೇಶ್ ಕುಮಾರ್, ಡಾ. ಸುಧಾಕರ್, ಚಾಮರಾಜನಗರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಕೋರಿ ಸುಪ್ರೀಂ ಕೋರ್ಟ್ ನ್ಯಾಯವಾದಿ ಎ. ರಮೇಶ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ಆಸ್ಪತ್ರೆಯಲ್ಲಿ ಮೇ 2 ಮತ್ತು 3 ನಡುವೆ ವೈದ್ಯರು ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಸುಮಾರು 24 ಜನರು ಸಾವನ್ನಪ್ಪಿದ್ದಾರೆ. ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿರುವುದನ್ನು ನಾನು ತಿಳಿದುಕೊಂಡೆ. ಈ ಬಗ್ಗೆ ಸರಿಯಾಗಿ ಮೇಲ್ವಿಚಾರಣೆ ಮಾಡದೇ ಇರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್‌ ಕುಮಾರ್, ಆರೋಗ್ಯ ಸಚಿವ ಡಾ. ಸುಧಾಕರ್, ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕ, ಮೆಡಿಕಲ್ ಕಾಲೇಜು ಡೀನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ಮೃತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News