'ಕವಿರತ್ನ ಕಾಳಿದಾಸ' ಸಿ‌ನಿಮಾ ಖ್ಯಾತಿಯ ನಿರ್ದೇಶಕ ರೇಣುಕಾ ಶರ್ಮಾ ಕೊರೋನ ಸೋಂಕಿಗೆ ಬಲಿ

Update: 2021-05-06 08:41 GMT

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕವಿರತ್ನ ಕಾಳಿದಾಸ, ಅಂಜದ ಗಂಡು, ಕಿಂದರಿ ಜೋಗಿ ಅಂತಹ ಹಿಟ್, ಸೂಪರ್ ಹಿಟ್, ಬ್ಲಾಕ್ ಬಸ್ಟರ್ ಸಿನಿಮಾಗಳ ನಿರ್ದೇಶಕ ರೇಣುಕಾ ಶರ್ಮಾ ಕೊರೋನ ಸೋಂಕಿನಿಂದ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ರೇಣುಕಾ ಶರ್ಮಾ ಅವರಿಗೆ ಕೊರೋನ ಸೋಂಕು ತಗುಲಿದ್ದು, ಕಳೆದ ದಿನಗಳಿಂದ ಗಿರಿನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿಮೋನಿಯಾ ಖಾಯಿಲೆ ಇದ್ದ ಕಾರಣ ರೇಣುಕಾ ಶರ್ಮಾ, ನಿನ್ನೆ ರಾತ್ರಿ ಕೊರೋನ ಸೋಂಕಿನಿಂದಾಗಿ ವಿಧಿವಶರಾಗಿದ್ದಾರೆ. 1981ರಲ್ಲಿ ಅನುಪಮ ಚಿತ್ರದ ಮೂಲಕ ನಿರ್ದೇಶಕರಾದ ರೇಣುಕಾ ಶರ್ಮಾ, ಕವಿರತ್ನ ಕಾಳಿದಾಸ,  ಶಹಬ್ಬಾಸ್ ವಿಕ್ರಮ್, ಸತ್ಕಾರ ಹಾಗೂ ನಮ್ಮ ಊರು ದೇವತೆ, ಅಂಜದ ಗಂಡು,  ಕಿಂದರಿ ಜೋಗಿ,ಶಬರಿ ಮಲೆ ಶ್ರೀ ಅಯ್ಯಪ್ಪ, ಭರ್ಜರಿ ಗಂಡು ಹಾಗೂ ಹಠಮಾರಿ ಹೆಣ್ಣು ಕಿಲಾಡಿ ಗಂಡು,  ಕೊಲ್ಲೂರು ಶ್ರೀ ಮೂಕಾಂಬಿಕೆ ಸೂಪರ್ ಹಿಟ್ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ. ರೇಣುಕಾ ಶರ್ಮಾ ಪತ್ನಿ ಇಬ್ಬರು ಹೆಣ್ಣು ಮಕ್ಕಳನ್ನ ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News