ಆಕ್ಸಿಜನ್, ಬೆಡ್ ಕೊರತೆ: ಆಸ್ಪತ್ರೆ ಆವರಣದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಶಾಸಕ ಡಾ.ರಂಗನಾಥ್
Update: 2021-05-06 15:10 IST
ತುಮಕೂರು, ಮೇ 6: ಆಕ್ಸಿಜನ್ ಕೊರತೆ, ಬೆಡ್ ಕೊರತೆ ನೀಗಿಸಲು ಆಗ್ರಹಿಸಿ ರಾಜ್ಯ ಸರಕಾರದ ವಿರುದ್ಧ ಕುಣಿಗಲ್ ಶಾಸಕ ಡಾ.ರಂಗನಾಥ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶಾಸಕ ಡಾ.ರಂಗನಾಥ್ ಗುರುವಾರ ಬೆಳಗ್ಗೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಆಕ್ಸಿಜನ್ ಸಹಿತ ಬೆಡ್ ಗಳ ಕೊರತೆ ನೀಗಿಸುವಂತೆ ಅವರು ಸರಕಾರಕ್ಕೆ ಆಗ್ರಹಿಸಿದ್ದಾರೆ. ರಾಜ್ಯದೆಲ್ಲೆಡೆ ಕೋವಿಡ್ ಸೋಂಕಿತರಿಗೆ ಬೆಡ್‌ಗಳ ಕೊರತೆ ಎದುರಾಗಿದೆ. ತುಮಕೂರು ಜಿಲ್ಲೆಯಲ್ಲೂ ಈ ಸಮಸ್ಯೆ ತಲೆದೋರಿದೆ. ಹೀಗಾಗಿ ಕೂಡಲೇ ಸರಕಾರ ಆಕ್ಸಿಜನ್ ಬೆಡ್‌ಗಳ ಕೊರತೆಯನ್ನು ನೀಗಿಸಬೇಕು ಎಂದು ಡಾ.ರಂಗನಾಥ್ ಆಗ್ರಹಿಸಿದ್ದಾರೆ.