ಕರ್ನಾಟಕಕ್ಕೆ ಹೆಚ್ಚುವರಿ ಆಕ್ಸಿಜನ್ ಪೂರೈಸಲು ಹೈಕೋರ್ಟ್ ನೀಡಿದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಕೇಂದ್ರ
Update: 2021-05-06 18:04 IST
ಹೊಸದಿಲ್ಲಿ: ಕೋವಿಡ್ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಈಗ ಒದಗಿಸಲಾಗುವ 965 ಮೆಟ್ರಿಕ್ ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಪ್ರಮಾಣವನ್ನು 1200 ಮೆಟ್ರಿಕ್ ಟನ್‍ಗೆ ಏರಿಕೆ ಮಾಡಬೇಕೆಂದು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟಿನ ಕದ ತಟ್ಟಿದೆ.
ಕರ್ನಾಟಕಕ್ಕೆ ಈಗಾಗಲೇ 956 ಮೆಟ್ರಿಕ್ ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಒದಗಿಸಲಾಗುತ್ತಿರುವುದರಿಂದ ಹೈಕೋರ್ಟ್ ಆದೇಶಕ್ಕೆ ತುರ್ತಾಗಿ ತಡೆ ಹೇರುವ ಅಗತ್ಯವಿದೆ ಎಂದು ಜಸ್ಟಿಸ್ ಡಿ ವೈ ಚಂದ್ರಚೂಡ್ ಅವರ ನೇತೃತ್ವದ ಪೀಠಕ್ಕೆ ಸಾಲಿಸಿಟಿರ್ ಜನರಲ್ ತುಷಾರ್ ಮೆಹ್ತಾ ಮನವಿ ಮಾಡಿದರು.
ಈ ಕುರಿತಂತೆ ಯಾವುದೇ ಆದೇಶ ಹೊರಡಿಸುವ ಮುನ್ನ ದಾಖಲೆಗಳನ್ನು ಪರಿಶೀಲಿಸಬೇಕಿದೆ ಎಂದು ಜಸ್ಟಿಸ್ ಎಂ ಆರ್ ಶಾ ಅವರನ್ನೊಳಗೊಂಡ ಪೀಠ ಹೇಳಿದೆ.