ಬಂಟ್ವಾಳ ತಾಲೂಕಿನಲ್ಲಿ ಒಂದೇ ದಿನ 381 ಮಂದಿಗೆ ಕೊರೋನ ಪಾಸಿಟಿವ್

Update: 2021-05-06 14:39 GMT

ಬಂಟ್ವಾಳ, ಮೇ 6: ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಒಂದೇ ದಿನ 381 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ತಾಲೂಕು ಆರೋಗ್ಯ ಇಲಾಖೆ ತಿಳಿಸಿದೆ. 

ಕಳೆದ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 1,191 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ‌ಅದರಲ್ಲಿ 381 ಪ್ರಕರಣ ಬಂಟ್ವಾಳ ತಾಲೂಕು ಒಂದರಲ್ಲೇ ದಾಖಲಾಗಿದೆ.‌

ತಾಲೂಕಿನಲ್ಲಿ ಇಂದು ದೃಢಪಟ್ಟವರ ಪೈಕಿ 356 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 12 ಮಂದಿ ಖಾಸಗಿ ಮತ್ತು 5 ಮಂದಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲೂಕಿನಲ್ಲಿ ಒಟ್ಟು 1,300 ಸಕ್ರಿಯ ಪ್ರಕರಣಗಳು ಇದ್ದು 1,191 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 109 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ 2021 ಎಪ್ರಿಲ್ 1ರಿಂದ ತಾಲೂಕಿನಲ್ಲಿ ಒಟ್ಟು 18 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News