×
Ad

ಉಡುಪಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ಬದಲಾವಣೆ ಇಲ್ಲ: ಡಿಸಿ ಜಗದೀಶ್

Update: 2021-05-06 21:30 IST

ಉಡುಪಿ, ಮೇ 6: ಉಡುಪಿ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ನಿಗದಿ ಪಡಿಸಿರುವ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದಿನ ಸಮಯವೇ ಮುಂದುವರಿಯಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಸರಕಾರದ ಆದೇಶದಂತೆ ಜಿಲ್ಲೆಯಲ್ಲಿ ಪ್ರಸ್ತುತ ಬೆಳಗ್ಗೆ 6ಗಂಟೆಯಿಂದ ಮಧ್ಯಾಹ್ನ 12ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಪಡಿಸಲಾಗಿದೆ. ಇದನ್ನು ಬದಲಾಯಿಸಲು ಜನಪ್ರತಿನಿಧಿಗಳ ಸಭೆ ಕರೆದು ನಿರ್ಧಾರ ಮಾಡಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News