×
Ad

ಮಹಾಲಕ್ಷ್ಮೀ ಕೋ ಅಪರೇಟಿವ್ ಬ್ಯಾಂಕ್ ವ್ಯವಹಾರದ ಸಮಯದಲ್ಲಿ ಬದಲಾವಣೆ

Update: 2021-05-06 21:43 IST

ಉಡುಪಿ, ಮೇ 6: ಕೊರೋನ ಕರ್ಫ್ಯೂ ಹಿನ್ನೆಲೆಯಲ್ಲಿ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಗ್ರಾಹಕರ ಅನುಕೂಲತೆಗಾಗಿ ಎಲ್ಲಾ ಶಾಖೆಗಳಲ್ಲಿ ವ್ಯವಹಾರದ ಸಮಯದಲ್ಲಿ ಬದಲಾವಣೆ ಮಾಡಿದ್ದು, ಬೆಳಗ್ಗೆ 8:30ರಿಂದ ಅಪರಾಹ್ನ 2 ಗಂಟೆಯವರೆಗೆ ಮರು ನಿಗದಿ ಪಡಿಸಲಾಗಿದೆ.

ಗ್ರಾಹಕ ಸ್ನೇಹಿ ಬ್ಯಾಂಕಿಂಗ್ ಸೇವೆ ನೀಡುವ ಉದ್ದೇಶದಿಂದ ಬೆಳಗ್ಗೆ 8:30 ರಿಂದಲೇ ನಗದು ಪಾವತಿ ಮತ್ತು ಜಮೆ ಮಾಡಲು ಅವಕಾಶ ಕಲ್ಪಿಸಿದ್ದು ಕೊರೊನ ಕರ್ಫ್ಯೂ ಅವಧಿಯಲ್ಲಿ ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ಪಡೆಯಲು ವ್ಯವಹಾರ ಸಮಯವನ್ನು ಬದಲಾವಣೆ ಮಾಡಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News