×
Ad

ಪಾಸಿಟಿವ್ ವರದಿ ಬಂದಾಗ ಮೊಬೈಲ್ ಸ್ವಿಚ್ ಆಫ್ ಮಾಡಿಕೊಳ್ಳುವವರ ವಿರುದ್ಧ ಎಫ್‍ಐಆರ್: ಸಚಿವ ಸೋಮಶೇಖರ್

Update: 2021-05-06 22:49 IST

ಮೈಸೂರು,ಮೇ.6: ಕೋವಿಡ್ ಪರೀಕ್ಷೆಗೆ ಒಳಗಾಗಿ ಪಾಸಿಟಿವ್ ವರದಿ ಬಂದಾಗ ಮೊಬೈಲ್ ಸ್ವಿಚ್ ಆಫ್ ಮಾಡಿಕೊಳ್ಳುವವರ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವರು ಪಾಸಿಟಿವ್ ವರದಿ ಬಂದ ತಕ್ಷಣ ಮೊಬೈಲ್ ಸ್ವಿಚ್ ಆಫ್ ಮಾಡಿಕೊಳ್ಳುತ್ತಾರೆ. ಇದರಿಂದ ಸೋಂಕಿತರನ್ನು ಹುಡುಕುವುದು ಕಷ್ಟವಾಗಿದೆ. ಅಂತಹವರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ಲಾಕ್‍ಡೌನ್ ಶೇ.100ರಷ್ಟು ಯಶಸ್ವಿಯಾಗಿದೆ. ಆದರೆ, ಬೆಳಗ್ಗೆ 6ರಿಂದ 10 ಗಂಟೆವರೆಗೆ ಪದಾರ್ಥಗಳನ್ನು ತರಲು ಜನ ಮುಗಿಬೀಳುತ್ತಿದ್ದು, ಇದರಿಂದ ಸೋಂಕು ಹೆಚ್ಚಾಗುತ್ತಿದೆ. ಈ ಬಗ್ಗೆಯೂ ಸಿಎಂ ಜೊತೆ ಮಾತನಾಡಿ ಕ್ರಮ ವಹಿಸಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News