ಉಡುಪಿಯಲ್ಲಿ ಮೂರು ಕೋವಿಡ್ ಕೇರ್ ಸೆಂಟರ್

Update: 2021-05-07 15:30 GMT

ಉಡುಪಿ, ಮೇ 7: ಹೋಮ್ ಐಸೋಲೇಷನ್‌ಗೆ ಮನೆಯಲ್ಲಿ ಸರಿಯಾದ ಸೌಲಭ್ಯವಿಲ್ಲದ ಕೋವಿಡ್ ಪಾಸಿಟಿವ್ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಜಿಲ್ಲೆಯಲ್ಲಿ ಮೂರು ಕೋವಿಡ್ ಕೇರ್ ಸೆಂಟರ್‌ಗಳನ್ನು ಉಡುಪಿ, ಕುಂದಾಪುರ ಹಾಗೂ ಕಾರ್ಕಳಗಳಲ್ಲಿ ತೆರೆಯಲಾಗುತ್ತಿದೆ.

ಉಡುಪಿಯಲ್ಲಿ 200 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಒಂದೆರಡು ದಿನಗಳಲ್ಲಿ ಕಾರ್ಯಾರಂಭಿಸಿದರೆ, ಕುಂದಾಪುರದ 80 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭಕ್ಕೆ ಸಜ್ಜಾಗಿದೆ. ಅದೇ ರೀತಿ ಕಾರ್ಕಳದ 80 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಸಹ ಕೆಲವೇ ದಿನಗಳಲ್ಲಿ ಪ್ರಾರಂಭ ಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News