ಗಾಂಜಾ ಸಾಗಾಟ: ಆರೋಪಿಯ ಬಂಧನ

Update: 2021-05-07 17:39 GMT

ಕೊಣಾಜೆ:  ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ‌ ದೇರಳಕಟ್ಟೆ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೊಣಾಜೆ ಪೊಲೀಸರು‌ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು‌ ನಾಟೆಕಲ್ ನ ಮಹಮ್ಮದ್ ಹನೀಫ್ (33) ಎಂದು ಗುರುತಿಸಲಾಗಿದೆ. 

ಈತ ದೇರಳಕಟ್ಟೆ ಬಳಿ ಸ್ಕೂಟರ್ ನಲ್ಲಿ ಸುಮಾರು ಒಂದು ಕೆ.ಜಿ.ಯಷ್ಟು ಗಾಂಜಾ ಸಾಗಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.  ಈತ‌ ಈ  ಹಿಂದೆಯೂ ಗಾಂಜಾ ಪ್ರಕರಣದಲ್ಲಿ‌ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ. ಈತನ ವಿರುದ್ದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News